ಕಾಂಗ್ರೆಸ್ ಸೇರ್ತಾರಾ ರೇಣುಕಾಚಾರ್ಯ..?; ಶಾಮನೂರು ಮನೆಯಲ್ಲಿ ನಡೆದ ಗುಪ್ತ ಮಾತುಕತೆ ಏನು..?
ದಾವಣಗೆರೆ; ಮಾಜಿ ಸಚಿವ ರೇಣುಕಾಚಾರ್ಯ ಬಿಜೆಪಿ ತೊರೆಯುವ ಲಕ್ಷಣ ಕಾಣುತ್ತಿದೆ. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಸೋಲಿನ ಬಳಿಕ ರೇಣುಕಾಚಾರ್ಯ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ಧ ಹರಿಹಾಯುತ್ತಾ ಬಂದಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ನೇರವಾಗೇ ವಾಗ್ದಾಳಿ ನಡೆಸಿದ್ದ ಅವರು, ಬಿಎಸ್‌ವೈ ಅವರನ್ನು ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ಹೇಳಿದ್ದರು. ಇದೀಗ ಅವರು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಮನೆಯಲ್ಲಿ ಕಾಣಿಸಿಕೊಂಡು ಕುತೂಹಲಕ್ಕೆ ಕಾರಣರಾಗಿದ್ದಾರೆ.
ಈ ಹಿಂದೆ ರೇಣುಕಾಚಾರ್ಯ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಇದೀ ಅವರು ಎಸ್‌ಎಸ್ ಮಲ್ಲಿಕಾರ್ಜುನ್ ಅವರನ್ನು ಭೆಟಿಯಾಗಿದ್ದಾರೆ. ಗುಪ್ತವಾಗಿ ಮಾತುಕತೆಗಳನ್ನು ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಎಸ್‌ಎಸ್ ಮಲ್ಲಿಕಾರ್ಜುನ್ ಅವರು ರೇಣುಕಾಚಾರ್ಯ ಅವರಿಗೆ ಕಾಂಗ್ರೆಸ್‌ಗೆ ಬರುವಂತೆ ಆಹ್ವಾನ ನೀಡಿದ್ದರು. ಆದ್ರೆ ರೇಣುಕಾಚಾರ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳುತ್ತಾ ಬಂದಿದ್ದರು. ಇದೀಗ ಇಬ್ಬರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.