CrimeDistricts

ಚಿಕಿತ್ಸೆ ಸಿಗದೆ ಮಹಿಳೆ ಸಾವು ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಸಮಿತಿ

ತುಮಕೂರು; ಇಲ್ಲಿ ಜಿಲ್ಲಾಸತ್ರೆಯಲ್ಲಿ ಆಧಾರ್‌ ಕಾರ್ಡ್‌ ಇಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ಸಿಗದೆ ಹೆರಿಗೆಗೆ ಬಂದಿದ್ದ ಮಹಿಳೆ ಹಾಗೂ ಎರಡು ನವಜಾತು ಶಿಶುಗಳ ಸಾವನ್ನಪ್ಪಿದ್ದವು. ಈ ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕಳೆದ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವರು, ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಮೂವರು ವೈದ್ಯರನ್ನೊಳಗೊಂಡ ತಂಡ ರಚಿಸಲಾಗಿದೆ ಎಂದು ತಿಳಿಸಿದರು. 2 ವಾರದಲ್ಲಿ ಇವರು ತನಿಖೆ ನಡೆಸಿ ವರದಿ ನೀಡಲಿದ್ದಾರೆ. ವರದಿ ಆಧಾರದ ಮೇಲೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Share Post