Districts

ವಿಜಯೇಂದ್ರ ಸಚಿವ ಸಂಪುಟ ಸೇರ್ತಾರಾ..?; ಈ ಬಗ್ಗೆ ಬಿಎಸ್‌ವೈ ಹೇಳಿದ್ದೇನು..?

ಮೈಸೂರು; ಇನ್ನೆರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನವಾಗಲಿದೆ. ಈ ಬಗ್ಗೆ ಹೈಕಮಾಂಡ್‌ ಚರ್ಚೆ ನಡೆಸುತ್ತಿದ್ದು, ಎರಡು ಮೂರು ದಿನದಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕೇಂದ್ರದ ನಾಯಕರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಹೇಳಿದರು. ಇನ್ನು ಬಿ.ವೈ.ವಿಜಯೇಂದ್ರ ಸಂಪುಟ ಸೇರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಆ ಬಗ್ಗೆ ನನಗೆ ಗೊತ್ತಿಲ್ಲ ಎಂದಷ್ಟೇ ಹೇಳಿ ಸುಮ್ಮನಾದರು.

 

ಇನ್ನು ಕಾಂಗ್ರೆಸ್‌, ಜೆಡಿಸ್‌ನಿಂದ ಬಿಜೆಪಿ ಬಂದು ಸಚಿವಗಿರಿ ಅನುಭವಿಸುತ್ತಿರುವವರು ಸಚಿವರಾಗಿ ಮುಂದುವರೆಯುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಇನ್ನು ಇದೇ ವೇಳೆ ಯಡಿಯೂರಪ್ಪ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Share Post