DistrictsPolitics

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಯಡಿಯೂರಪ್ಪ ವಿಶ್ವಾಸ

ದೊಡ್ಡಬಳ್ಳಾಪುರ; ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಚಿವ ಸುಧಾಕರ್‌ ಅವರ ಪರಿಶ್ರಮದಿಂದ ಈ ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಬಲ ಬಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮಳೆಹಾನಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ನಿಮ್ಮ ಮಾತುಗಳಿಗೆ ನಾನು ಸದನದಲ್ಲಿ ಉತ್ತರ ಕೊಡುತ್ತೇನೆ ಎಂದು ಯಡಿಯೂರಪ್ಪ ಅವರು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅಧಿಕಾರದ ಭ್ರಮೆಯಲ್ಲಿ ಮುಳುಗಿದ್ದಾರೆ. ಆದ್ರೆ ಅದು ಸಾಧ್ಯವಾಗುವುದಿಲ್ಲ. ಮುಂದಿನ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Share Post