Districts

ಸಂಕೀರ್ತನಾ ಯಾತ್ರೆಯಲ್ಲಿ ರಾರಾಜಿಸುತ್ತಿವೆ ಕೇಸರಿ ಧ್ವಜಗಳು

ಮಂಡ್ಯ: ಹಿಂದೂ ಜಾಗರಣ ವೇದಿಕೆ ವತಿಯಿಂದ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ನಗರದಲ್ಲಿ ಕೇಸರಿ ಧ್ವಜಗಳು ರಾರಾಜಿಸುತ್ತಿದೆ. ರಾಜ್ಯದ ವಿವಿಧೆಡೆಯಿಂದ ಬಂದಿರುವ ಹನುಮಾನ್‌ ಮಾಲಾಧಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಹನುಮಾನ್‌ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಅಂಗವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಗಂಜಾಂನಿಂದ ಆರಂಭಗೊಳ್ಳಲಿರುವ ಮಾಲಾಧಾರಿಗಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿ ರಂಗನಾಥ ಸ್ವಾಮಿ ದೇವಾಲಯ ತಲುಪಲಿದೆ.

ಇನ್ನು ಯಾತ್ರೆ ವೇಳೆ ಅನುಮಾನಾಸ್ಪದ ವ್ಯಕ್ತಿಯೊಬ್ಬ ಮಾಲಾಧಾರಿಗೆ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಲಾಧಾರಿಗಳೆಲ್ಲ ಸೇರಿಕೊಂಡು  ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Share Post