Districts

ಜನವರಿ 15ರಂದು ಮೈಸೂರಿನಲ್ಲಿ ಯೋಗಥಾನ್‌; ನೋಂದಣಿ ಆರಂಭ

ಮೈಸೂರು; ಜನವರಿ 15 ರಂದು ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಇದ್ರಲ್ಲಿ ಸುಮಾರು 80 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.

ಕಾರ್ಯಕ್ರಮಕ್ಕೆ ಈಗಾಗಲೆ ನೊಂದಣಿ ಕಾರ್ಯ ಪ್ರಾರಂಭವಾಗಿದೆ. ನೋಂದಣಿಯಾದವರು ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ಯೋಗಾಥಾನ್ ಗೆ ಪ್ರವೇಶ ಪಡೆಯಬಹುದಾಗಿದೆ. ಶಾಲಾ, ಕಾಲೇಜು, ವಸತಿ ಶಾಲೆಗಳಿಂದ ನೊಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಪಾರ್ಕಿಂಗ್, ಕುಡಿಯುವ ನೀರು, ಶೌಚಾಲಯ, ವೇದಿಕೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಿ ಜವಾಬ್ದಾರಿಗಳನ್ನು ವಹಿಸಿಲಾಗಿದೆ. ಶಿಷ್ಠಾಚಾರ, ಭದ್ರತೆ ಹಾಗೂ ಸಾರಿಗೆ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮವಹಿಸಿ, ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು
ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೂಚನೆ ನೀಡಿದ್ದಾರೆ

Share Post