DistrictsHealth

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೀಕಾ ವೈರಸ್‌ ಪತ್ತೆ; ಆತಂಕದಲ್ಲಿ ಜನ

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೀಕಾ ವೈರಸ್‌ ಪತ್ತೆಯಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಶ್ರೀಕ್ಷೇತ್ರ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳಲ್ಲಿ ಅಪಾಯಕಾರಿ ಜೀಕಾ ವೈರಸ್‌ ಪತ್ತೆಯಾಗಿದೆ. ಇದರಿಂದಾಗಿ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಕೆಲ ದಿನಗಳ ಹಿಂದೆ ಕೇರಳದಲ್ಲಿ ಜೀಕಾ ವೈರಸ್‌ ಸದ್ದು ಮಾಡಿತ್ತು. ಒಂದಿಬ್ಬರು ಇದರಿಂದ ಮೃತಪಟ್ಟಿದ್ದರು. ಐದಾರು ಮಂದಿಗೆ ಈ ವೈರಸ್‌ ಹರಡಿತ್ತು. ಇದೂ ಕೂಡಾ ಕರೋನಾ ವೈರಸ್‌ನಂತೆ ಹರಡುತ್ತದೆ. ಜೊತೆಗೆ ಇದರಲ್ಲಿ ಸಾಯುವರ ಸಂಖ್ಯೆ ಹೆಚ್ಚು. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ.

ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿ ಸುತ್ತಮುತ್ತಲಿನ ಗ್ರಾಮಗಳ ಜನರು ಈ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಜೊತೆಗೆ ಆರೋಗ್ಯ ಇಲಾಖೆ ಕೂಡಾ ಹೈಅಲರ್ಟ್‌ ಘೋಷಣೆ ಮಾಡಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡಾ ಸೊಳ್ಳೆಗಳನ್ನು ತಡೆಗಟ್ಟಿ ವೈರಸ್‌ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಜೀಕಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳನ್ನು ಹಿಡಿದು ಅವುಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.  ಚಿಕ್ಕಬಳ್ಳಾಪುರ ಜಿಲ್ಲೆಯ ಆರು ಪ್ರದೇಶಗಳಲ್ಲಿ ಸೊಳ್ಳೆಗಳನ್ನು ಕೂಡಾ ಪರೀಕ್ಷೆಗೊಳಪಡಿಸಲಾಗಿತ್ತು.  ಸದ್ಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಮಾರಕ ಜೀಕಾ ವೈರಸ್‌ ಪತ್ತೆಯಾಗಿದೆ.

 

Share Post