ಇಂದಿರಾಗಾಂಧಿಯವರೇ ಸಾವರ್ಕರ್ರನ್ನು ದೇಶದ ಶ್ರೇಷ್ಠ ಪುತ್ರ ಎಂದಿದ್ದರು; ಸಿಎಂ
ಹಾವೇರಿ; ಸಾವರ್ಕರ್ ಬಗ್ಗೆ ಇಂದಿರಾಗಾಂಧಿಯವರೇ ದೇಶದ ಶ್ರೇಷ್ಠ ಪುತ್ರ ಎಂದು ಬಣ್ಣಿಸಿದ್ದರು. ಐತಿಹಾಸಿಕ ಮಹಾಪುರುಷರ ಬಗ್ಗೆ ಪರ–ವಿರೋಧಗಳು ಎಲ್ಲ ಕಾಲದಲ್ಲೂ ಇರುತ್ತವೆ. ಆದರೆ, ಮಿತಿಮೀರಿ ಮಾತಾಡಿ ಒಂದು ವರ್ಗದ ಜನರ ಭಾವನೆಗೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಸಮಾಜದ ಶಾಂತಿಯನ್ನು ಎಲ್ಲರೂ ಕಾಪಾಡಬೇಕು. ರಾಜ್ಯದ ಸಮಸ್ಯೆ, ಸವಾಲುಗಳ ಬಗ್ಗೆ ಚರ್ಚೆ ನಡೆಸಬೇಕು. ಐತಿಹಾಸಿಕ ಪುರುಷರ ಬಗ್ಗೆ ಅನಗತ್ಯ ಚರ್ಚೆಗಳು ನಡೆಯುತ್ತಿರುವುದು ಸರಿಯಲ್ಲ ಎಂದರು. ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳ ಆಧಾರದ ಮೇಲೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ನಿರ್ಧರಿಸುತ್ತೇವೆ. ನ್ಯಾಯಾಲಯಗಳ ತೀರ್ಪು ಸೇರಿದಂತೆ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಕೂಡಲಸಂಗಮದ ಶ್ರೀಗಳ ಜೊತೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.