ಡಿಸೆಂಬರ್ 23ರವರೆಗೆ ನಿತ್ಯ 2700 ಕ್ಯೂಸೆಕ್ ಕಾವೇರಿ ನೀರು ಹರಿಸಲು ಸೂಚನೆ
ನವದೆಹಲಿ; ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ರಾಜ್ಯಕ್ಕೆ ಆದೇಶ ಹೊರಡಿಸಿದೆ. ಪ್ರಾಧಿಕಾರ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಸೂಚನೆ ಕೊಟ್ಟಿದ್ದು, ಇಂದಿನಿಂದ ಒಂದು ತಿಂಗಳವರೆಗೆ ಅಂದರೆ ಡಿಸೆಂಬರ್ 23ರವರೆಗೆ ದಿನಕ್ಕೆ 2700 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ.
ದೆಹಲಿಯಲ್ಲಿ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಡಿಸೆಂಬರ್ ಅವಧಿಯಲ್ಲಿ ಹರಿಸಬೇಕಿದ್ದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿದೆ. ಆದ್ರೆ ಮಳೆ ಕೊರತೆಯಾಗಿರುವುದರಿಂದ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದ ಮಾಡಿದೆ. ಎರಡೂ ಕಡೆಯ ವಾದ ಆಲಿಸಿದ ಪ್ರಾಧಿಕಾರ, ಮೇಲಿನಂತೆ ಆದೇಶ ಹೊರಡಿಸಿದೆ.