Economy

ಇಂದು ಪಿಎಂ ಕಿಸಾನ್‌ ಯೋಜನೆ 10 ನೇ ಕಂತು ಬಿಡುಗಡೆ

ದೆಹಲಿ: ಭಾರತ ಸರ್ಕಾರವು ಸಣ್ಣ ಮತ್ತು ಅತೀ ಸಣ್ಣ ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಈಗಾಗಲೇ ಚಾಲ್ತಿಯಲ್ಲಿದ್ದು, ದೇಶದ ಎಲ್ಲಾ ಸಣ್ಣ ಮತ್ತು ಅತೀ ಸಣ್ಣ ರೈತರು ಇದರ ಸದುಪಯೋಗ ಪಡೆಯುತ್ತಿದ್ದಾರೆ. ಈ ಯೋಜನೆಯ 10ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು  (ಜನವರಿ 1, 2022)  ಬಿಡುಗಡೆ ಮಾಡಲಿದ್ದಾರೆ. ಸುಮಾರು ಇಪ್ಪತ್ತು ಸಾವಿರ ಕೋಟಿ ಹಣವನ್ನು ಈ ನಿಧಿಗೆ ಜಮಾವಣೆ ಮಾಡಲಿದ್ದು ಹತ್ತು ಕೋಟಿಗೂ ಹೆಚ್ಚು ರೈತರಿಗೆ ಈ ಹಣ ಸಿಗಲಿದೆ. ಇದುವರೆಗೂ 1.6 ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣವನ್ನು ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ.

ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ. ಎರಡು ಹೆಕ್ಟೇರ್‌ವರೆಗೆ ಕೃಷಿ ಭೂಮಿ ಹೊಂದಿರುವ ಯಾವುದೇ ರೈತರು ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು. ಒಂದು ವೇಳೆ ನೋಂದಾವಣಿಯಾಗದಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಭೇಟಿ ನೀಡಿ ಮಾಹಿತಿ ಪಡೆದು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ. ಅಥವಾ ಈಗಾಗಲೇ ನೋಂದಾವಣಿಯಾಗಿದ್ದಲ್ಲಿ https://pmkisan.gov.in/. ವೆಬ್‌ಸೈಟ್‌ಗೆ ಹೋಗಿ ನಿಮ್ಮ ಡೇಟಾ ಪಡೆಯಬಹುದು

Share Post