EconomyNational

ಪೆಟ್ರೋಲ್‌ ಬೆಲೆ 9 ರೂ., ಡೀಸೆಲ್‌ 5 ರೂ. ಇಳಿಕೆ

ನವದೆಹಲಿ; ವಾಹನ ಸವಾರರಿಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರಿ ಇಳಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ತೈಲ ಬೆಲೆಗಳ ಮೇಲಿನ ಸುಂಕ ಕಡಿಮೆ ಮಾಡಿದ್ದು, ಇದರಿಂದಾಗಿ ಪೆಟ್ರೋಲ್ ಮೇಲೆ ಪ್ರತಿ ಲೀಟರ್​ಗೆ 9 ರೂಪಾಯಿ 5 ಪೈಸೆ ಹಾಗೂ ಡಿಸೇಲ್ ಮೇಲೆ 7 ರೂಪಾಯಿ ಇಳಿಕೆಯಾಗಿದೆ.

ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಟ್ವೀಟ್‌ ಮಾಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ. ಬೆಂಗಳೂರಿನಲ್ಲಿ ಸದ್ಯ ಪೆಟ್ರೋಲ್ ಬೆಲೆ 111.09 ರೂಪಾಯಿ ಹಾಗೂ ಡೀಸೆಲ್ ಬೆಲೆ 94.79 ರೂಪಾಯಿ ಇದೆ. ಕೇಂದ್ರ ಘೋಷಿಸಿದಂತೆ ಅಬಕಾರಿ ಸುಂಕ ಕಡಿಮೆ ಮಾಡಿದರೆ ಪೆಟ್ರೋಲ್ ಬೆಲೆ 102.09 ಪೈಸೆ ಹಾಗೂ ಡಿಸೇಲ್ ಬೆಲೆ 87.79 ಪೈಸೆ ಆಗಲಿದೆ.

Share Post