ನವರಾತ್ರಿ ಹಬ್ಬಕ್ಕೆ ಕೇಂದ್ರ ನೌಕರರಿಗೆ ಬಂಪರ್; ತುಟ್ಟಿ ಭತ್ಯೆ ಶೇ.4 ಹೆಚ್ಚಳ
ನವದೆಹಲಿ; ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ಡಿಆರ್ ಅನ್ನು ಹೆಚ್ಚಿಸಕಾಗಿದೆ. ತುಟ್ಟಿ ಭತ್ಯೆ ಹಾಗೂ ಡಿಆರ್‌ನ್ನು ಶೇ 4ರಷ್ಟು ಏರಿಕೆ ಮಾಡುವ ಪ್ರಸ್ತಾವನೆ ಇಡಲಾಗಿತ್ತು. ಇದಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಈ ಹೆಚ್ಚಳ ಜುಲೈ 1ಕ್ಕೆ ಪೂರ್ವಾನ್ವಯವಾಗಲಿದೆ.
ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಕ್ರಮವಾಗಿ 12,852.56 ಕೋಟಿ ಹಾಗೂ 8,568.36 ಕೋಟಿ ಹೊರೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.