Karnataka Budget; ಬೆಂಗಳೂರು ನಗರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆಗಳು!
ಬೆಂಗಳೂರು; ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಬೆಂಗಳೂರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದಕ್ಕಾಗಿ ಕೋಟಿ ಕೋಟಿ ಅನುದಾನ ನೀಡಲಾಗಿದೆ. ಮೆಟ್ರೋ ರೈಲು ಮಾರ್ಗಗಳ ವಿಸ್ತರಣೆ, ಸುರಂಗ ಮಾರ್ಗ ನಿರ್ಮಾಣ, ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಸೇರಿ ಹಲವು ಕೊಡುಗೆಗಳನ್ನು ಬೆಂಗಳೂರಿಗಾಗಿ ನೀಡಲಾಗಿದೆ.
ಬೆಂಗಳೂರಿಗೆ ಬಜೆಟ್‌ನಲ್ಲಿ ಏನೆಲ್ಲಾ ಕೊಡುಗೆ ಸಿಕ್ಕಿದೆ..?
==============================
ನಗರದ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳ ಡಿಜಿಟಲೀಕರಣ
ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಮಾಲೀಕರಿಗೆ ಲಭ್ಯ
ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ
1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿ, ಡಿಸೆಂಬರ್ 2025 ರೊಳಗೆ ಪೂರ್ಣ
ಸುರಂಗ ಮಾರ್ಗ ನಿರ್ಮಿಸುವ ಮೂಲಕ ಸಂಚಾರ ದಟ್ಟಣೆ ಕಡಿಮೆ ಮಾಡಲು ನಿರ್ಧಾರ
ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ ಮಾಡಲಾಗುವುದು
ರಾಜಕಾಲುವೆ ನಾಲೆಗಳ ಬಫರ್ ವಲಯದಲ್ಲಿ ಸರ್ವಋತು ರಸ್ತೆಗಳನ್ನು ನಿರ್ಮಾಣ
200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ಬಫರ್ ರಸ್ತೆಗಳ ನಿರ್ಮಾಣ
ಪ್ರಸಕ್ತ ಸಾಲಿನಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತದೆ
ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಪೆರಿಫೆರಲ್ ರಿಂಗ್ ರೋಡ್ ಗಳ ನಿರ್ಮಾಣ
ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ 73 ಕಿ.ಮೀ. ಉದ್ದದ ರಸ್ತೆ
27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ
ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ (Sky-Deck) ನಿರ್ಮಾಣ
BBMP. BMRCL BWSSB, BDA ಗಳ ವ್ಯಾಪ್ತಿಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ
ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್-ಅರ್ಬನ್ ರೈಲು ಯೋಜನೆ ಸೇರಿ ಬಹುವಿಧ ಸಾರಿಗೆ ವ್ಯವಸ್ಥೆ
250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ
ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ
ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ
2025ರೊಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ
ಮೆಟ್ರೋ ಯೋಜನೆ ಹಂತ-2, 2ಎ ಯೋಜನೆಯಡಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಮಾರ್ಗ 2026ಕ್ಕೆ ಪೂರ್ಣ
ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ
200 ಕೋಟಿ ರೂ.ಗಳ ಮೊತ್ತದಲ್ಲಿ 110 ಹಳ್ಳಿಗಳಿಗೆ ಕುಡಿಯುವ ನೀರು ಸೌಲಭ್ಯ
ಬೆಂಗಳೂರು ನಗರ – ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡನೆ
ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನಿನಲ್ಲಿ ತ್ಯಾಜ್ಯ ಸಂಸ್ಕರಣೆ
ನಗರದಲ್ಲಿ ರಾತ್ರಿ 1ರ ವರೆಗೂ ವ್ಯಾಪಾರ ವಹಿವಾಟು ವಿಸ್ತರಣೆ