Economy

Karnataka Budget; ನೀರಾವರಿ ಯೋಜನೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಸಿಕ್ಕಿರುವ ಅನುದಾನವೆಷ್ಟು..?

ಬೆಂಗಳೂರು; ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನೀರಾವರಿಗೆ ಹೆಚ್ಚು ಒತ್ತು ನೀಡಲಾಗಿದೆ. ರಾಜ್ಯ ಹಲವು ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲಿರಿಸಲಾಗಿದೆ. ಸಿದ್ದರಾಮಯ್ಯ ನವರು 2024-25ನೇ ಸಾಲಿನ ಬಜೆಟ್‌ನಲ್ಲಿ ನೀರಾವರಿಗಾಗಿ ಬರೋಬ್ಬರಿ 19,179 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.

ಯಾವ  ಯೋಜನೆಗೆ ಅನುಮೋದನೆ ನೀಡಲಾಗಿದೆ..?

==================================

ಭದ್ರಾ ಮೇಲ್ದಂಡೆ ಯೋಜನೆ – ಕೇಂದ್ರ ಸರ್ಕಾರ ಘೋಷಿಸಿದ್ದ 5,300 ಕೋಟಿ ರೂ. ಅನುದಾನ ನೀಡುವಂತೆ ಆಗ್ರಹ

ಕಳಸಾ – ಬಂಡೂರಿ ನಾಲಾ ತಿರುವು ಯೋಜನೆ ಜಾರಿಗೆ ಸರ್ವ ಕ್ರಮ

ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಯೋಜನಾ ವರದಿ ಸಿದ್ದ

ಕೆಆರ್‌ಎಸ್ ಡ್ಯಾಂನ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ – 3 ಯೋಜನೆ ಅಡಿ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ

ಹೇಮಾವತಿ ಯೋಜನೆ: ವೈನಾಲೆಯಡಿ 5.45 ಕಿ. ಮೀ. ಉದ್ದದ ನಾಲೆ ಆಧುನೀಕರಣ, ತುಮಕೂರು ಶಾಖಾ ನಾಲೆಯಡಿ 166.90 ಕಿ. ಮೀ. ಉದ್ದದ ನಾಲೆ ಆಧುನೀಕರಣ

ಕುಡಿಯುವ ನೀರು, ಕೃಷಿ ಹಾಗೂ ಕೈಗಾರಿಕೆಗಳಿಗೆ ನೀರನ್ನು ಸಮರ್ಪಕವಾಗಿ ಪೂರೈಸಲು ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ಮತ್ತು ಬ್ರಿಡ್ಜ್ ಕಂ ಬ್ಯಾರೇಜ್ ನಂತಹ 115 ಕಾಮಗಾರಿಗಳನ್ನು 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು

ಪ್ರಗತಿಯಲ್ಲಿರುವ 455 ಕೋಟಿ ರೂ. ಮೊತ್ತದ ಕೆ.ಸಿ ವ್ಯಾಲಿ 2ನೇ ಹಂತದ ಉದ್ದೇಶಿತ 272 ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

ರಾಯಚೂರು ಜಿಲ್ಲೆಯ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಬಿ.ಸಿ.ಬಿ ನಿರ್ಮಾಣ, ಮಾನ್ವಿ ತಾಲ್ಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆ

ಮೈಸೂರು ಜಿಲ್ಲೆಯ ಕೆ. ಆರ್. ನಗರ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಏತ ನೀರಾವರಿ, ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದ ಬಳಿ ಏತ ನೀರಾವರಿ, ಚಿತ್ತಾಪುರ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ

ಸೊರಬ ತಾಲ್ಲೂಕಿನ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್, ಜೇವರ್ಗಿ ತಾಲ್ಲೂಕಿನಲ್ಲಿ ಬಾಂದಾರು ಹಾಗೂ ಕೆರೆ ತುಂಬಿಸುವ ಕಾಮಗಾರಿ

ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನಲ್ಲಿ ಕೆರೆ / ಬ್ರಿಡ್ಜ್ ಕಂ ಬ್ಯಾರೇಜ್ ಯೋಜನೆಗಳನ್ನು 850 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.

ಕರ್ನಾಟಕದ ನೀರಾವರಿ ನಿಗಮದ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ

ರಾಜ್ಯಾದ್ಯಂತ ಏತ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ 7,280 ಕೋಟಿ ರೂ. ಅಂದಾಜು ಮೊತ್ತ.

ಕೃಷ್ಣ ಭಾಗ್ಯ ಜಲ ನಿಗಮದ ಅಡಿ ಏತ ನೀರಾವರಿ ಯೋಜನೆಗಳಿಗೆ 3,779 ಕೋಟಿ ರೂ.

ಕೊಪ್ಪಳದ ಯಲಬುರ್ಗಾ – ಕುಕನೂರು ತಾಲ್ಲುಕಿನ 38 ಕೆರೆಗಳ ಅಭಿವೃದ್ಧಿಗೆ 970 ಕೋಟಿ ರೂ.

ಕೃಷ್ಣಾ ನ್ಯಾಯಾಧಿಕರಣ – 2ರ ಅಂತಿಮ ತೀರ್ಪಿನ ಬಾಕಿ ಇರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಒತ್ತಾಯ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ

ಪ್ರಗತಿಯಲ್ಲಿ ಇರುವ ಏತ ನೀರಾವರಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಪಣ

ಏತ ನೀರಾವರಿ ಯೋಜನೆಗಳು-ಬೂದಿಹಾಳ್-ಪೀರಾಪುರ ಹಂತ- 1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ, ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಹಾಗೂ ಗುರುಮಿಠಕಲ್ ಯೋಜನೆ ಶೀಘ್ರ ಪೂರ್ಣ

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಾರಾಯಣ ಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ

 

Share Post