ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ – ನಿರ್ಮಲಾ ಸೀತಾರಾಮನ್
ನವದೆಹಲಿ; ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಆದಾಯ ತೆರಿಗೆ ಪಾವತಿದಾರರಿಗೆ ಈ ಬಜೆಟ್‌ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. 2024ನೇ ಸಾಲಿನಲ್ಲಿ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನೇರ ಮತ್ತು ಪರೋಕ್ಷ ತೆರಿಗೆಯಲ್ಲಿ ಬದಲಾವಣೆ ಮಾಡದೇ 7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ ಎಂದು ಅವರು ಘೋಷಿಸಿದ್ದಾರೆ.
ಕೇಂದ್ರ ಸರ್ಕಾರ 2022-23ನೇ ಸಾಲಿನ ತೆರಿಗೆ ಪದ್ಧತಿಯನ್ನೇ ಮುಂದುರಿಸಲು ತೀರ್ಮಾನಿಸಲಾಗಿದೆ. ಹಾಲಿ ಇರುವ ತೆರಿಗೆ ಪದ್ಧತಿಯನ್ನೇ ಮುಂದುವರಿಸಲಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. 7 ಲಕ್ಷ ರೂಪಾಯಿ ಆದಾಯ ಇರುವವರಿಗೆ ತೆರಿಗೆ ಇಲ್ಲ. ಅಂದ್ರೆ ಆದಾಯ ತೆರಿಗೆ ಪಾವತಿದಾರರು 7 ರೂಪಾಯಿವರೆಗೂ ವಿನಾಯಿತಿಯನ್ನು ಪಡೆಯಬಹುದು.