ಇದು ಜನಪರ ಹಾಗೂ ಬಡವರ ಬಜೆಟ್; ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಬಡವರ ಕಲ್ಯಾಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ರಚನೆ ಮಾಡಲಾಗಿದೆ. ಎಲ್ಲಾ ವರ್ಗವದವರಿಗೂ ಬಜೆಟ್‌ನಿಂದ ಅನುಕೂಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಮಂಡನೆ ಮುಗಿದ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅತ್ಯುತ್ತಮ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಈ ಬಜೆಟ್‌ನಲ್ಲಿ ಡಿಜಿಟಲ್ ತಂತ್ರಜ್ಞಾನ ಅಭಿವೃದ್ಧಿಗೂ ಹೆಚ್ಚಿಗೆ ಆದ್ಯತೆ ನೀಡಲಾಗಿದೆ. ಪ್ರತಿಯೊಬ್ಬರಿಗೂ ಮನೆ, ಶೌಚಾಲಯ ಸಿಗಬೇಕೆನ್ನುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ರೈತರ ಕಲ್ಯಾಣಕ್ಕೂ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಹೀಗಾಗಿ ಇದು ಉದ್ಯೋಗ, ಮೂಲ ಸೌಕರ್ಯ ಕಲ್ಪಿಸುವ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಬಗ್ಗೆ ಜನಸಾಮಾನ್ಯರಿಂದ ಎಲ್ಲಾ ವರ್ಗದ ಜನರೂ ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಮತ್ತಷ್ಟು ಕೆಲಸಗಳನ್ನು ಮಾಡಲು ನಮಗೆ ಉತ್ಸಾಹ ತುಂಬಿದಂತಾಗಿದೆ ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.