BengaluruHealth

ಕೊವಿಡ್‌ ಹೆಚ್ಚಳ ಹಿನ್ನೆಲೆ; ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾರ್ಗಸೂಚಿ ಜಾರಿ

ದೇವನಹಳ್ಳಿ; ಕೊವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಳ ಹಾಗೂ ನಾಲ್ಕ ಅಲೆ ಬರುವ ಮುನ್ಸೂಚನೆ ಇರುವುದರಿಂದ ದೇಶದಲ್ಲಿ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಅದೇ ರೀತಿ ದೇವನಹಳ್ಳಿ ವಿಮಾನ ನಿಲ್ದಾಣದಲ್ಲೂ ಕೊವಿಡ್‌ ಮಾರ್ಗಸೂಚಿ ಪ್ರಕಟಿಸಲಾಗಿದೆ. ಏರ್‌ಪೋರ್ಟ್‌ ಬರುವ ಪ್ರಯಾಣಿಕರಿಗೆ ಕೆಲವು ಮುನ್ನೆಚ್ಚರಿಕೆ ಮಾರ್ಗಸೂಚಿ ಕ್ರಮಗಳ ಬಿಡುಗಡೆ ಮಾಡಲಾಗಿದೆ.

ಮಾರ್ಗಸೂಚಿಯಲ್ಲಿ ಏನಿದೆ?;
ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
ಶೇ.2ರಷ್ಟು ಪ್ರಯಾಣಿಕರಿಗೆ ರ‍್ಯಾಂಡಮ್ ಕೋವಿಡ್‌ ಟೆಸ್ಟ್
ರೋಗ ಲಕ್ಷಣಗಳು ಕಂಡುಬರುವ ಪ್ರಯಾಣಿಕರು ತತ್‌ಕ್ಷಣ ಐಸೋಲೇಷನ್
12 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಅಲ್ಲ
ರೋಗ ಗುಣ ಲಕ್ಷಣಗಳು ಇದ್ದರೆ ಮಾತ್ರ ಟೆಸ್ಟಿಂಗ್ ಮಾಡಿಸಿಕೊಳ್ಳಬೇಕು
ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರು ಸ್ವಯಂ ನಿಗಾವಹಿಸಲು ಸೂಚನೆ

Share Post