ಪಕ್ಷಕ್ಕೆ ಮುಜುಗರ ತರಿಸಬೇಡಿ; ಪಾದಯಾತ್ರೆ ನಿಲ್ಲಿಸಿ ಅಂದ್ರಾ ರಾಹುಲ್ ಗಾಂಧಿ..?
ರಾಮನಗರ: ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಒಂದು ವೇಳೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರೆಸಿದರೆ, ಅದನ್ನು ನಿಲ್ಲಿಸಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸನ್ನದ್ಧರಾಗಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿಯವರ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಪಕ್ಷಕ್ಕೆ ಮುಜುಗರ ಆಗಬಾರದು. ಆ ರೀತಿಯಾಗಿ ನೀವೇ ನಿರ್ಧಾರ ತೆಗೆದುಕೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಮುಂದೇನು ಮಾಡುವುದು ಎಂದು ಚಿಂತನೆ ನಡೆಸಿದ್ದಾರೆ. ನಾಲ್ಕೈದು ಜನ ಪಾದಯಾತ್ರೆ ಮುಂದುವರೆಸಬಹುದಾ..? ಅಥವಾ ಪೂರ್ತಿ ನಿಲ್ಲಿಸಬಹುದಾ ಎಂಬುದರ ಬಗ್ಗೆ ಚರ್ಚೆ ನಡೆದಿದೆ.