Health

ಫ್ರಾನ್ಸ್‌ನಲ್ಲಿ ಒಂದೇ ದಿನ 1 ಲಕ್ಷ ಮಂದಿಗೆ ಕೊವಿಡ್‌ ಸೋಂಕು..!

ಪ್ಯಾರಿಸ್: ಒಂದು ಕಡೆ ಪ್ರಪಂಚದಾದ್ಯಂತ ಒಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದ್ರಿಂದಾಗಿ ಬಹುತೇಕ ದೇಶಗಳಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಈ ನಡುವೆಯೇ ಕೊವಿಡ್‌ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ಅದ್ರಲ್ಲೂ ಫ್ರಾನ್ಸ್‌ನಲ್ಲಿ ಒಂದೇ ದಿನ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ, ಪ್ರಪಂಚದಲ್ಲಿ ಕೊವಿಡ್‌ ಮೂರನೇ ಅಲೆಯ ಆತಂಕ ಎದುರಾಗಿದೆ.

     ಫ್ರಾನ್ಸ್‌ ರಾಜಧಾನಿ  ಪ್ಯಾರಿಸ್‌ ಸೇರಿದಂತೆ ಹಲವು ನಗರಗಳಲ್ಲಿ ಕೊವಿಡ್‌ ಸೋಂಕಿತರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಜಾಸ್ತಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಒಂದು ಲಕ್ಷದ ನಾಲ್ಕು ಸಾವಿರ ಮಂದಿಗೆ ಕೊವಿಡ್‌ ಸೋಂಕು ಇರುವುದು ಪತ್ತೆಯಾಗಿದೆ.

ಫ್ರಾನ್ಸ್‌ನಲ್ಲಿ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ಶ್ರುವಾರದಿಂದಲೇ ಫ್ರಾನ್ಸ್‌ ದೇಶದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಎರಡೂ ವ್ಯಾಕ್ಸಿನ್‌ ಪಡೆದವರು ಮೂರು ತಿಂಗಳ ನಂತರ ಬೂಸ್ಟರ್‌ ಡೋಸ್‌ ಪಡೆಯಲು ಅರ್ಹರಾಗಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಚೆಯೇ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದರೂ ಫ್ರಾನ್ಸ್‌ ದೇಶದಲ್ಲಿ ಕೊವಿಡ್‌ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯಲ್‌ ಮಾಕ್ರಾನ್‌ ಪ್ರಮುಖ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.

Share Post