Health

ಮಸ್ಕಿ ಸರ್ಕಾರಿ ಪ್ರೌಢ ಶಾಲೆಯಲ್ಲಿ 21 ಬಾಲಕಿಯರಿಗೆ ಕೋವಿಡ್‌ ದೃಢ

ರಾಯಚೂರು : ಮಸ್ಕಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ 21 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಶಾಲೆಯನ್ನು ಮೂರು ದಿನ ಬಂದ್‌ ಮಾಡಲಾಗಿದೆ. ಇನ್ನು ಶಾಲೆಯ ಎಲ್ಲಾ ವಿದ್ಯಾರ್ಥಿನಿಯರಿಗೆ ಕೋವಿಡ್‌ ಟೆಸ್ಟ್‌ ಮಾಡಿಸಲಾಗಿವುದು. 21 ಸೋಂಕಿತರನ್ನು ಐಸೋಲೇಟ್‌ ಮಾಡಲಾಗಿದ್ದು ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಹಶೀಲ್ದಾರ್‌ ಕವಿತಾ ಅವರು ತಿಳಿಸಿದ್ದಾರೆ.

ಶಾಲೆಯ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸರ್‌ ಅನ್ನು ಸಿಂಪಡಿಸಲಾಗಿದೆ. ಮಕ್ಕಳ ಆರೋಗ್ಯ ದೃಷ್ಠಿಯಿಂದ ಹೆಚ್ಚಿನ ಕಾಳಜಿ ವಹಿಸಲಾಗಿದೆ ಎಂದು ಹೇಳಿದ್ದಾರೆ.

Share Post