ಮಹಾರಾಷ್ಟ್ರ & ಪಶ್ಚಿಮ ಬಂಗಾಳದಲ್ಲಿ ಕೊರೊನಾ ಆರ್ಭಟ; 170 ವೈದ್ಯರಿಗೂ ಸೋಂಕು..!
ನವದೆಹಲಿ: ಮಹಾರಾಷ್ಟ್ರ ಹಾಗೂ ಪಶ್ಚಿಮ ಬಂಗಾಳಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಎರಡೂ ರಾಜ್ಯಗಳಲ್ಲಿ ದಿನಕ್ಕೆ ಹತ್ತು ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ಇರುವುದು ದೃಢಪಡುತ್ತಿದೆ. ಪಾಸಿಟಿವಿಟಿ ರೇಟ್ ಕೂಡಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದ್ರಲ್ಲೂ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೇ ಕೊರೊನಾ ವಕ್ಕರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 170 ರೆಸಿಡೆಂಟ್ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎಲ್ಲಾ ವೈದ್ಯರನ್ನೂ ಐಸೋಲೇಷನ್‌ನಲ್ಲಿ ಇಡಲಾಗಿದೆ. ಅವರ ಸಂಪರ್ಕಿತರು ಹಾಗೂ ಅವರ ಕುಟುಂಬದವರ ಪರೀಕ್ಷೆ ನಡೆಸಲಾಗಿದೆ.
ಇನ್ನು ಪಶ್ಚಿಮ ಬಂಗಾಳದಲ್ಲೂ ಕೂಡಾ ಕೊರೊನಾ ಹೆಚ್ಚು ಬಾಧಿಸುತ್ತಿದೆ. ಇಲ್ಲೂ ಕೂಡಾ ನೂರಾರು ವೈದ್ಯರು, ನರ್ಸ್‌ಗಳಿಗೆ ಕೊರೊನಾ ವಕ್ಕರಿಸಿದೆ. ಪಶ್ಚಿಬಂಗಾಳದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹತ್ತು ಸಾವಿರ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.