Health

ಐವತ್ತು ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ..!

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೊನಾ ಸೋಂಕಿತರ ಸಂಖ್ಯೆ ಅರ್ಧ ಲಕ್ಷ ದಾಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 50,210 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಕೊಂಡಿದೆ.  ಇದ್ರಲ್ಲಿ ಬೆಂಗಳೂರಿನ 26,299 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯಾದ್ಯಂತ ಇಂದು ಒಟ್ಟು 19 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದ್ರಲ್ಲಿ ಬೆಂಗಳೂರಿನವರೇ 8 ಮಂದಿ ಸೇರಿದ್ದಾರೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,57,796 ಕ್ಕೆ ಏರಿಕೆಯಾಗಿದೆ.  22,842 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ ‌ 35,17,682 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು 2,20,459 ಮಂದಿಗೆ ಕೊರೊನಾ ಟೆಸ್ಟ್‌ ಮಾಡಿಸಲಾಗಿದೆ. ಇಲ್ಲಿಯತನಕ ಒಟ್ಟು 6,05,54,973 ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Share Post