Health

ಕೊರೊನಾ ರಿಪೋರ್ಟ್‌; ಬೆಂಗಳೂರಲ್ಲಿ ಸೋಂಕು ಇಳಿಕೆ

ಬೆಂಗಳೂರು: ಕೊರೊನಾ ಮಹಾಮಾರಿಯ ಪ್ರಭಾವ ಇಳಿಕೆಯಾದಂತೆ ಕಾಣುತ್ತಿದೆ. ಅದರಲ್ಲೂ ಬೆಂಗಳೂರಲ್ಲಿ ತಾಂಡವವಾಡುತ್ತಿದ್ದ ಕೊರೊನಾ ಕ್ರಮೇಣ ಇಳಿಕೆಯಾಗುತ್ತಿದೆ. ಇಂದು ರಾಜಧಾನಿಯಲ್ಲಿ 19,105 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಿಂದಿನ ದಿನಗಳಿಗೆ ಹೋಲಿಸಿದರೆ ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಗುಣಮುಖರಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ.

ಇನ್ನು ರಾಜ್ಯದಲ್ಲಿ ಇಂದು 41,400 ಸಾವಿರ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಖುಷಿಯ ವಿಚಾರವೆಂದರೆ ಇಂದು 53,093 ಸಾವಿರ ಮಂದಿ ಗುಣಮುಖರಾಗಿದ್ದಾರೆ. ದುಃಖದ ಸಂಗತಿ ಎಂದರೆ ಇಂದು ಅತಿ ಹೆಚ್ಚು ಸಾವನ್ನಪ್ಪಿದ್ದಾರೆ. ಇವತ್ತು ಕೊರೊನಾ ರಾಜ್ಯದಲ್ಲಿ 52 ಮಂದಿಯನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,50,742 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 1,55,054 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

Share Post