Health

48 ಸಾವಿರ ಮಂದಿಗೆ ಕೊರೊನಾ ಸೋಂಕು; 39 ಮಂದಿ ಬಲಿ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಾಟ ಮತ್ತೆ ಹೆಚ್ಚಳವಾಗುತ್ತಿದೆ. ಇಂದು 48,905 ಮಂದಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಇಂದು ರಾಜ್ಯಾದ್ಯಂತ ಒಟ್ಟು 39 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾಗೆ ಇದುವರೆಗೆ 38,705 ಮಂದಿ ಸಾವಿಗೀಡಾಗಿದ್ದಾರೆ. 

ಬೆಂಗಳೂರಿನಲ್ಲೂ ಪ್ರಕರಣಗಳು ಹೆಚ್ಚಾಗಿವೆ. ಇಂದು ಬೆಂಗಳೂರು ನಗರದಲ್ಲಿ 22,427 ಹೊಸ ಕೇಸ್‌ಗಳು ದಾಖಲಾಗಿವೆ. ಇದರೊಂದಿಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 16,48,758ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ.

ಇಂದು ರಾಜ್ಯಾದ್ಯಂತ 41,699 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯಾದ್ಯಂತ ಒಟ್ಟು 3,57,909 ಸಕ್ರಿಯ ಪ್ರಕರಣಗಳಿವೆ.

Share Post