DistrictsHealth

ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥ, ಓರ್ವ ಯುವಕ ದುರ್ಮರಣ!

ಮೈಸೂರು; ಗ್ರಾಮ ಪಂಚಾಯತಿಯವರು ಪೂರೈಕೆ ಮಾಡಿದ ಕಲುಷಿತ ನೀರು ಕುಡಿದು ಯುವಕನೊಬ್ಬ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ಸುಮಾರು 35ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ..
ಕೆ ಸಾಲುಂಡಿ ಗ್ರಾಮದ 23 ವರ್ಷದ ಕನಕರಾಜು ಸಾವನ್ನಪ್ಪಿರುವ ಯುವಕ ಎಂದು ಗುರುತಿಸಲಾಗಿದೆ.. ಗ್ರಾಮಕ್ಕೆ ಪೂರೈಕೆಯಾಗಿರುವ ಕುಡಿಯುವ ನೀರು ಕಲುಷಿತಗೊಂಡು ಈ ಗಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.. ನೀರು ಕುಡಿದ ಗ್ರಾಮಸ್ಥರು ವಾಂತಿ, ಬೇದಿಯಿಂದ ಬಳಲುತ್ತಿದ್ದಾರೆ.. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..
ಕೆ.ಸಾಲುಂಡಿ ಗ್ರಾಮಕ್ಕೆ ಡಿಎಚ್ ಓ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.. ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡಾ ಗ್ರಾಮದಲ್ಲಿ ಬೀಡುಬಿಟ್ಟಿದ್ದು, ಜನರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.. ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಕೂಡಾ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ ಜರುಗಿಸಲಾಗಿದೆ.
ಕಲುಷಿತ ನೀರು ಸೇವಿಸಿ ಮೃತಪಟ್ಟ ಕನಕರಾಜು ಮೃತ ಕುಟುಂಬಕ್ಕೆ ಮುಡಾ ಅಧ್ಯಕ್ಷ ಮರೀಗೌಡ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

Share Post