DistrictsHealth

ಕಾಫಿನಾಡಿನಲ್ಲಿ 78ಮಂದಿಗೆ ಕೊರೊನಾ ಪಾಸಿಟಿವ್

ಚಿಕ್ಕಮಗಳೂರು : ನಿನ್ನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 78 ಮಂದಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ. ವಿದ್ಯಾರ್ಥಿಗಳಲ್ಲೇ ಹೆಚ್ಚಾಗಿ  ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.  ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿರುವ  ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಹಾಗೆಯೇ ಆಲ್ದೂರಿನಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೂ ಪಾಸಿಟಿವ್ ಬಂದಿದ್ದು, ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ. ಒಟ್ಟು ನಿನ್ನೆ ಒಂದೇ ದಿನ ಚಿಕ್ಕಮಗಳೂರಿನ ಎರಡು ವಸತಿ ಶಾಲೆಗಳ 58 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ವಿಚಾರ ತಿಳಿಯುತ್ತಿದ್ದಂತೆ ಮಕ್ಕಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಆತಂಕ ಪಡುವ ಆಗತ್ಯವಿಲ್ಲ ಮಕ್ಕಳಿಗೆ ಬೇಕಾದ ಸೂಕ್ತ ಚಿಕಿತ್ಸೆ ನೀಡುವುದಾಗಿ ಡಿಹೆಚ್‌ಓ ತಿಳಿಸಿದ್ದಾರೆ.

Share Post