HealthNational

ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ; ಊಟ ಸೇವಿಸಿದ 64 ವಿದ್ಯಾರ್ಥಿಗಳು ಅಸ್ವಸ್ಥ!

ಅನ್ನಮಯ್ಯನಗರ; ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದು, ಅದನ್ನು ಸೇವಿಸಿದ 64 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಆಂಧ್ರಪ್ರದೇಶದ ಅನ್ನಮಯ್ಯ ನಗರದಲ್ಲಿ ಈ ಘಟನೆ ನಡೆದಿದೆ. ಅನ್ನಮಯ್ಯ ನಗರದ ಟೇಕುಲಪಾಲೆಂ ಗ್ರಾಮದ ಮಂಡಲ ಪರಿಷತ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಅಕ್ಕಿಯಲ್ಲಿ ಹಲ್ಲಿ ಬಿದ್ದಿದ್ದು, ಅದನ್ನು ಹಾಗೆಯೇ ಪಾತ್ರೆಗೆ ಹಾಕಿ ಅನ್ನ ಮಾಡಲಾಗಿದೆ. ಸಿಬ್ಬಂದಿ ಸರಿಯಾಗಿ ಪರಿಶೀಲನೆ ಮಾಡದೇ ಹಾಗೆಯೇ ಅನ್ನ ಮಾಡಿದ್ದರಿಂದ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 

ನಿನ್ನೆ ಮಧ್ಯಾಹ್ನ ಆಹಾರ ಸೇವಿಸಿದ ಒಂದು ಗಂಟೆಯೊಳಗೆ ಮಕ್ಕಳು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

Share Post