ಶಾಸಕಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್
ಬೆಂಗಳೂರು : ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮನೆಯಲ್ಲಿಯೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರಡನೇ ಅಲೆಯ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಈಗ ಮೂರನೇ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಒಟ್ಟು ೧೪ಲಕ್ಷಕ್ಕೂ ಹೆಚ್ಚು ಸಕ್ರಿಯ ಕೇಸ್‌ಗಳು ಇವೆ. ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯೇ ಇದೆ.
ಅನಿತಾ ಕುಮಾರಸ್ವಾಮಿ ಅವರಿಗೆ ಸೌಮ್ಯ ಗುಣಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.