HealthNational

ಕೇಂದ್ರದಿಂದ ಕರ್ನಾಟಕಕ್ಕೆ ಕೊರೊನಾ ಎಚ್ಚರಿಕೆಯ ಸಂದೇಶ

ದೆಹಲಿ: ದೇಶದಲ್ಲಿ ಕೊರೊನಾ ಮತ್ತು ಓಮಿಕ್ರನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೆ ಕೇಂದ್ರದಿಂದ ಮತ್ತೊಂದು ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಅವರು ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ಕೊರೊನಾ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರವನ್ನು ಬರೆದಿದ್ದಾರೆ. ಕರ್ನಾಟಕ, ಹರಿಯಾಣ, ದೆಹಲಿ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದದು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿ, ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಸೌಲಭ್ಯವನ್ನು ವೃದ್ದಿಸಿ ಮತ್ತು ಕೋವಿಡ್ ಲಸಿಕೆ ಅಭಿಯಾನವನ್ನು ತ್ವರಿತಗೊಳಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈಗಾಗಲೇ ಭಾರತದಲ್ಲಿ ಗುರುವಾರ 13,154 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ 24 ಗಂಟೆಯಲ್ಲಿ 268 ಮಂದಿ ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ 961ಕ್ಕೆ ಏರಿಕೆಯಾಗಿದೆ. ಇದುವರೆಗೆ 21 ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳು ಕಂಡುಬಂದಿವೆ ಹಾಗಾಘಿ ಸೂಕ್ತ ಕ್ರಮಗಳನ್ನು ಈಗಿನಿಂದಲೇ ತೆಗೆದುಕೊಳ್ಳಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Share Post