HealthPolitics

ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ; ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ಮಧ್ಯ ರಾತ್ರಿ ನಿಧನರಾಗಿದ್ದಾರೆ.. ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು.. ಆದ್ರೆ ಕಳೆದ ರಾತ್ರಿ 1.20ರ ಸುಮಾರಿಗೆ ಕಾರ್ಡಿಯಾಕ್‌ ಅರೆಸ್ಟ್‌ ಆಗಿ ನಿಧನರಾಗಿದ್ಧಾರೆ ಎಂದು ವೈದ್ಯರು ಪ್ರಕಟಿಸಿದ್ದಾರೆ..

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದರು ಆರು ಬಾರಿ ಸಂಸದರಾಗಿದ್ದ ಶ್ರೀನಿವಾಸ ಪ್ರಸಾದ್‌ ಅವರು, ಮೂರು ಬಾರಿ ಶಾಸಕರೂ ಆಗಿದ್ದರು.. ಕಾಂಗ್ರೆಸ್‌ ಪಕ್ಷ, ಜನತಾದಳ ಹಾಗೂ ಬಿಜೆಪಿಯಲ್ಲಿ ಅವರು ಗುರುತಿಸಿಕೊಂಡಿದ್ದರು.. ಇತ್ತೀಚೆಗಷ್ಟೇ ಶ್ರೀನಿವಾಸ ಪ್ರಸಾದ್‌ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು.. ವಿ. ಶ್ರೀನಿವಾಸ ಪ್ರಸಾದ್ ಅವರು ಪತ್ನಿ‌ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್, ಡಾ.ಮೋಹನ್ ಅವರನ್ನು ಅಗಲಿದ್ದಾರೆ…

ಅಪಾರ ಅಭಿಮಾನಿಗಳನ್ನು ಹೊಂದಿದ್ದ ಶ್ರೀನಿವಾಸ ಪ್ರಸಾದ್‌:

ವಿ.ಶ್ರೀನಿವಾಸ ಪ್ರಸಾದ್‌ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು.. ಚಾಮರಾಜನಗರ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿದ್ದ ಅವರು, 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು..

ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿವಾಸ ಪ್ರಸಾದ್‌ ಅವರು​ ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

 

Share Post