Health

ಮೇಕೆದಾಟು ಯೋಜನೆಗೆ ಸಿದ್ಧ; ಡಿಕೆಶಿಗೆ ಸಿಎಂ ಬೊಮ್ಮಾಯಿ ಪತ್ರ

ಬೆಂಗಳೂರು; ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಕೊವಿಡ್‌ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬೊಮ್ಮಾಯಿ, ಸರ್ಕಾರ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಿದ್ಧವಿದೆ. ಮೇಕೆದಾಟು ಯೋಜನೆ ಮಾಡಿಯೇ ತೀರುತ್ತೇವೆ. ಹೀಗಾಗಿ ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ನಡೆಸುವುದು ಸರಿಯಲ್ಲ. ಇದ್ರಿಂದ ಸೋಂಕು ಹೆಚ್ಚಾಗಿ ಹರಡುತ್ತದೆ. ಹೀಗಾಗಿ ಪಾದಯಾತ್ರೆ ಕೈಬಿಡಿ, ನಿಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಅನುಷ್ಠಾನಕ್ಕೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

Share Post