Health

ಸಿಎಂ ನೇತೃತ್ವದ ಸಭೆ ಆರಂಭ: ನೈಟ್‌ ಕರ್ಫ್ಯೂ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊವಿಡ್‌ ಹಾಗೂ ಒಮಿಕ್ರಾನ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ.

ಸಿಎ ಗ‌ೃಹ ಕಚೇರಿ ಕೃಷ್ಣಾದಲ್ಲಿ ಸಭೆ ಈಗಾಗಲೇ ಆರಂಭವಾಗಿದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ಕಮಲ್‌ ಪಂಥ್‌, ಸಚಿವರಾದ ಡಾ.ಕೆ.ಸುಧಾಕರ್‌, ಆರ್‌.ಅಶೋಕ್‌ ಹಾಗೂ ಹಲವು ಪ್ರಮುಖ ತಜ್ಞರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಈಗಾಗಲೇ ಹಲವು ರಾಜ್ಯಗಳಲ್ಲಿ ಕಠಿಣ ರೂಲ್ಸ್‌ ಜಾರಿಗೆ ತರಲಾಗಿದೆ. ಗುಜರಾತ್‌, ಮಧ್ಯಪ್ರದೇಶ್‌ ಹಾಗೂ ಉತ್ತರ ಪ್ರದೇಶದಲ್ಲಿ ಈಗಾಗಲೇ ನೈಟ್‌ ಕರ್ಫ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲೂ ಕಠಿಣ ರೂಲ್ಸ್‌ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ನೈಟ್‌ ಕರ್ಫ್ಯೂ ಜಾರಿ ಮಾಡುವುದು ಹಾಗೂ ಹೊಸ ವರ್ಷಾಚರಣೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ಜೊತೆಗೆ ಒಮಿಕ್ರಾನ್‌ ತಡೆಯಲು ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ತಜ್ಞರ ಸಲಹೆ ಪಡೆದ ನಂತರ ಹೊಸ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ.

 

Share Post