BengaluruDistrictsHealth

ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ; ಒಂದೇ ಶಾಲೆಯ 37 ಮಕ್ಕಳಿಗೆ ಸೋಂಕು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಶುರುವಾಗುವ ಲಕ್ಷಣ ಕಂಡುಬಿರುತ್ತಿದೆ. ನಿನ್ನೆಯಷ್ಟೇ ಧಾರವಾಡದ ಎಸ್‌ಡಿಎಂ ಮೆಡಿಕಲ್‌ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಅದರ ಸಂಖ್ಯೆ 185ಕ್ಕೆ ಏರಿದೆ. ಹೀಗಿರುವಾಗಲೇ ಬೆಂಗಳೂರಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂ ಸರ್ಜಾಪುರ ರಸ್ತೆಯ ದೊಡ್ಡಸಂದ್ರ ಬಳಿಯ ಖಾಸಗಿ ಶಾಲೆಯ 37 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. 13-15 ವರ್ಷದ 33 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, ಉಳಿದ ನಾಲ್ವರು ಸಿಬ್ಬಂದಿಗೆ ಪಾಸಿಟಿವ್‌ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಲೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

  ಮತ್ತೊಂದೆಡೆ ಧಾರವಾಡದ ಎಸ್‌ಡಿಎಂ ಮೆಡಿಕಲ್ ಕಾಲೇಜಿನ 185 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ನಿನ್ನೆ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ನಿನ್ನೆ 690 ಜನರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಇದರಲ್ಲಿ ಮತ್ತೆ 116 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಜಿಲ್ಲಾಡಳಿತ ಎಸ್‌ಡಿಎಂ ಕ್ಯಾಂಪಸ್‌ನಲ್ಲಿರುವ ಎರಡು ಹಾಸ್ಟೆಲ್‌ಗಳನ್ನು ಸೀಲ್‌ ಡೌನ್‌ ಮಾಡಿದೆ.

SDM ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪಾಲಕರಿಗೂ ಸಂಕಷ್ಟ ಎದುರಾಗಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ‌ ವಿದ್ಯಾರ್ಥಿಗಳ ಪಾಲಕರಿಗೆ ಕೊವಿಡ್ ಟೆಸ್ಟ್‌ ಮಾಡಿಸುವಂತೆ ಸೂಚನೆ ನೀಡಿದ್ದಾರೆ. ನವೆಂಬರ್ 17ರಂದು‌ ಕಾಲೇಜಿನಲ್ಲಿ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆಲ್ಲಾ ಆತಂಕ ಶುರುವಾಗಿದೆ.

Share Post