ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ; ಬೆಂಗಳೂರಿಗೆ ಬರುತ್ತಿದ್ದ 20 ಬಸ್ ವಾಪಸ್
ಮುಂಬೈ: ಮುಂಬೈನಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನದಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ 20ಕ್ಕೂ ಹೆಚ್ಚು ಖಾಸಗಿ ಬಸ್ಗಳನ್ನು ಕರ್ನಾಟಕದ ಗಡಿಯಲ್ಲೇ ತಡೆದು ವಾಪಸ್ ಕಳುಹಿಸಲಾಗಿದೆ.
ಬೆಳಗಾವಿಯ ಗಡಿಯಲ್ಲಿ ತಪಾಸಣೆ ಹೆಚ್ಚು ಮಾಡಲಾಗಿದ್ದು, ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಕಳೆದ ರಾತ್ರಿ ಮುಂಬೈನಿಂದ 20ಕ್ಕೂ ಹೆಚ್ಚು ಖಾಸಗಿ ಬಸ್ಗಳು ಬೆಂಗಳೂರಿಗೆ ಬರಬೇಕಿತ್ತು. ಆದರೆ ಈ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಬಹುತೇಕರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿರಲಿಲ್ಲ. ಅವರ ಬಳಿ ನೆಗೆಟಿವ್ ರಿಪೋರ್ಟ್ ಇರಲಿಲ್ಲ. ಹೀಗಾಗಿ ಚೆಕ್ಪೋಸ್ಟ್ನಲ್ಲಿ ತಡೆದು ಬಸ್ಗಳನ್ನು ಅಲ್ಲಿಂದಲೇ ವಾಪಸ್ ಕಳುಹಿಸಲಾಯಿತು.