Health

ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು..!

ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕಟ್ಟುನಿಟ್ಟಿನ ನಿಯಮಾವಳಿ ಜಾರಿ ಮಾಡಲಾಗಿದೆ. ಸೋಂಕಿತ ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೀನ್‌ ಮಾಡಲಾಗಿದೆ.

ಇದುವರೆಗೆ ಮಂಗಳೂರಿನಲ್ಲಿ 10 ದಿನದಲ್ಲಿ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ ಅವರಿಗೂ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀತಿ ಹೆಚ್ಚಾಗಿದೆ.

Share Post