Health

ಕೊರೊನಾ ಪಾಸಿಟಿವಿಟಿ ರೇಟ್‌ನಲ್ಲಿ ಬೆಂಗಳೂರೇ ಟಾಪ್‌

ಬೆಂಗಳೂರು: ಬೆಂಗಳೂರು ಕೊರೊನಾ ಪಾಸಿಟಿವಿ ದರ ಜಾಸ್ತಿಯಾಗುತ್ತಿದೆ. ಎರಡು ದಿನದ ಹಿಂದೆ ಬೆಂಗಳೂರು ನಗರದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.1.3ರಷ್ಟಿತ್ತು. ಆದ್ರೆ ಇಂದು ಅದು ಶೇಕಡಾ.2.36ಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ತರುವುದು ಸವಾಲಿನ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಸಂಜೆ ನಡೆಯುವ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈಜುಕೊಳ, ಜಿಮ್‌, ಥಿಯೇಟರ್‌, ಮಾಲ್‌, ಹೋಟೆಲ್‌, ಮಾಲ್‌, ರೆಸ್ಟೋರೆಂಟ್‌ಗಳಲ್ಲಿ 50-50 ಗೆ ಅವಕಾಶ ನೀಡುವಂತೆ ತಜ್ಞರು ಸರ್ಕಾರಕ್ಕೆ ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಂಜೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯ ನಂತರ ಬೆಂಗಳೂರು ಹಾಗೂ ರಾಜ್ಯಾದ್ಯಂತ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸೆಮಿ ಲಾಕ್‌ಡೌನ್‌ ಹಾಗೂ ವೀಕೆಂಡ್‌ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹೆಚ್ಚು ಜನ ಸೇರುವ ಧಾರ್ಮಿಕ ಕೇಂದ್ರಗಳ ಬಂದ್‌ಗೆ ತಜ್ಞರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಶಾಲೆಗಳನ್ನು ಮುಚ್ಚುವ ಬಗ್ಗೆಯೂ ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.

 

Share Post