Health

ಮೊದಲ 3 ಗಂಟೆಯಲ್ಲಿ 4.25 ಲಕ್ಷ ಮಕ್ಕಳಿಕೆ ಲಸಿಕೆ

ನವದೆಹಲಿ: 15 ರಿಂದ 18 ವರ್ಷದೊಳಗಿನ ಮಕ್ಕಳ ಕೊರೊನಾ ಲಸಿಕಾ ಅಭಿಯಾನಕ್ಕೆ ಭರ್ಜರಿ ಆರಂಭ ಸಿಕ್ಕಿದೆ. ಮಕ್ಕಳು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯುತ್ತಿದ್ದಾರೆ. ಅಭಿಯಾನ ಶುರುವಾದ ಮೊದಲ ಮೂರು ಗಂಟೆಯಲ್ಲೇ ದೇಶದಲ್ಲಿ ಸುಮಾರು 4.25 ಲಕ್ಷ ಮಕ್ಕಳು ತಮ್ಮ ಮೊದಲ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ದೇಶದಲ್ಲಿ ಇದುವರೆಗೆ ಮಕ್ಕಳು 12.5 ಲಕ್ಷ ಮಕ್ಕಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಈಗಾಗಲೇ ಮೂರನೇ ಒಂದು ಭಾಗದಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ. ದೇಶದ ಬಹುತೇಕ ಕಡೆ ಶಾಲೆ, ಕಾಲೇಜುಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಪೋಷಕರು ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸುತ್ತಿದ್ದಾರೆ. ಕೊವಿನ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ನೋಂದಣಿ ಕೂಡಾ ಹೆಚ್ಚಾಗುತ್ತಿದೆ.

15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಹಾಕಿಸಲು ಮೊದಲು ಕೊವಿನ್‌ ಪೋರ್ಟಲ್‌ ನಲ್ಲಿ ನೋಂದಾಯಿಸಬೇಕು. ಅನಂತರ ಪೋರ್ಟಲ್‌ ನೀಡಿದ ದಿನಾಂಕದಂದು ಹೋಗಿ ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ. ದೇಶದಲ್ಲಿ ಕೊವಿಡ್‌ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಜೊತೆಗೆ ಒಮಿಕ್ರಾನ್‌ ಕೇಸ್‌ಗಳು ಕೂಡಾ ಹೆಚ್ಚಾಗುತ್ತಿವೆ. ಮೂರನೇ ಅಲೆ ಶುರುವಾದಂತೆ ಕಾಣುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ತಗಲುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಎಚ್ಚೆತ್ತುಕೊಂಡು ತಮ್ಮ ಮಕ್ಕಳಿಗೆ ವ್ಯಾಕ್ಸಿನ್‌ ಹಾಕಿಸುತ್ತಿದ್ದಾರೆ.

Share Post