HealthNational

ದೇಶದಲ್ಲಿ ಕೊರೊನಾ ಹೆಚ್ಚಳ; ಒಂದೇ ದಿನ 6 ಸಾವಿರ ಹೊಸ ಪ್ರಕರಣಗಳು

ನವದೆಹಲಿ; ಬೇಸಿಗೆ ಶುರುವಾಗುತ್ತಿದ್ದಂತೆ ಕೊರೊನಾ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿವೆ. ನಿನ್ನೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6155 ಹೊಸ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಇದುವರೆಗೆ ದೇಶದಲ್ಲಿ 4.47 ಕೋಟಿ ಮಂದಿಗೆ ಸೋಂಕು ತಗುಲಿದಂತಾಗಿದ್ದು, ಇದರಲ್ಲಿ 5 ಲಕ್ಷ 30 ಸಾವಿರದ 954 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ 6050 ಮಂದಿಗೆ ಸೋಂಕು ತಗುಲಿದೆ. ಕೇರಳಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ದೇಶಾದ್ಯಂತ ನಿನ್ನೆ 11 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,194ಕ್ಕೆ ಏರಿಕೆಯಾಗಿದೆ.

Share Post