ಕಾಫಿನಾಡಿನ ವಸತಿ ಶಾಲೆಯಲ್ಲಿ 70ಮಂದಿಗೆ ಕೋವಿಡ್ ಸೋಂಕು
ಚಿಕ್ಕಮಗಳೂರು: ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೀಗೋಡು ಜವಾಹರ್ ನವೋದಯ ವಸತಿ ಶಾಲೆಯಲ್ಲಿ 70 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೊಡ್ಡ ಕ್ಲಸ್ಟರ್ ಪತ್ತೆಯಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಇನ್ನು ಕೋವಿಡ್ ಸಂಬಂಧ ಎಲ್ಲಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದ್ದು, ವಸತಿ ನಿಲಯದ ಕೋವಿಡ್ ಸೋಂಕಿತರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದಿದ್ದಾರೆ.