Health

ಕೋವಿಡ್‌ ಸೋಂಕಿತರ ಹೆಚ್ಚಳ; ಶಾಲಾ-ಕಾಲೇಜುಗಳಿಗೆ ಹೊಸ ಮಾರ್ಗಸೂಚಿ..?

ಬೆಂಗಳೂರು: ರಾಜ್ಯ ಶಾಲಾ-ಕಾಲೇಜುಗಳಲ್ಲಿ ಕೊವಿಡ್‌ ಕೇಸ್‌ಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದ ಕೆಲವು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಯಮಾವಳಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಂದ ವರದಿ ಕೇಳಿದೆ. ವರದಿ ಸಿಕ್ಕ ನಂತರ ಅಗತ್ಯವಾದರೆ ಶಾಲಾ-ಕಾಲೇಜುಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

Share Post