ಜ್ವರ ಕೆಮ್ಮು ಇದ್ದರೂ ಕೊರೊನಾ ಪರೀಕ್ಷೆ ಮಾಡಿಸಿ : ಕೇಂದ್ರ ಸೂಚನೆ
ನವದೆಹಲಿ : ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಯಾವುದೇ ವ್ಯಕ್ತಿಯಲ್ಲಿ ಜ್ವರ, ಕೆಮ್ಮು, ತಲೆ ನೋವು , ಗಂಟಲು ನೋವು, ಉಸಿರಾಟ ಸಮಸ್ಯೆ, ಮೈಕೈ ನೋವು, ರುಚಿ ಅಥವಾ ವಾಸನೆ ಗ್ರಹಿಕೆ ಸಾಧ್ಯವಾಗದ ಲಕ್ಷಣಗಳಿದ್ದಲ್ಲಿ ಅಂಥವರನ್ನು ಶಂಕಿತ ಕೋವಿಡ್ ಸೋಂಕಿತರು ಎಂದು ಪರಿಗಣಿಸಬೇಕು. ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಲಾಗಿದೆ.
೨೪ಗಂಟೆಯೂ ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ತೆರೆದಿರುವಂತೆ ಸರ್ಕಾರ ಆದೇಶ ಮಾಡಿದೆ. ವೈದ್ಯಕೀಯ ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಬೇಕು. ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡುವ ಕಿಟ್ ಬಳಕೆಗೆ ಪ್ರೋತ್ಸಾಹ ನೀಡಬೇಕು ಎಂದು ಸೂಚನೆ ನೀಡಲಾಗಿದೆ.