Health

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಚಿಕಿತ್ಸೆ ಇಲ್ಲ; ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ; ರಾಜ್ಯ ಸಂಪುಟ ತೀರ್ಮಾನ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್‌ ಬೆಡ್‌ ಖಾಲಿ ಇದೆ. ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಚಿಕಿತ್ಸೆಗೆ ಲಕ್ಷ ಲಕ್ಷ ಬಿಲ್‌ ಮಾಡುತ್ತಿದ್ದಾರೆ. ಹೀಗಾಗಿ, ಖಾಸಗಿ ಆಸ್ಪತ್ರೆಗಳಲ್ಲಿ ತಾತ್ಕಾಲಿಕವಾಗಿ ಕೊವಿಡ್‌ ಚಿಕಿತ್ಸೆಗೆ ಬ್ರೇಕ್‌ ಹಾಕಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.

ಇಂದು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಿ ಕೊವಿಡ್‌ ಆಸ್ಪತ್ರೆಗಳಲ್ಲಿ ಬೆಡ್‌ ಖಾಲಿ ಇವೆ. ಆಸ್ಪತ್ರೆಗೆ ದಾಖಲಾಗುವ ಕೊವಿಡ್‌ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಹೀಗಾಗಿ, ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಚಿಕಿತ್ಸೆಗೆ ಅವಕಾಶ ನೀಡುವ ಅವಶ್ಯಕತೆ ಬರುವುದಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ಗೆ ಚಿಕಿತ್ಸೆ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಸಂಪುಟ ಸಭೆ ತೀರ್ಮಾನಿಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿರುವ ಬೆಡ್‌ಗಳು ತುಂಬಿದ ಮೇಲೆ ಖಾಸಗಿ ಆಸ್ಪತ್ರೆಗಳಿಗೆ ಅವಕಾಶ ನೀಡಲಾಗುತ್ತದೆ. ಅಲ್ಲಿಯವರೆಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಗೆ ಚಿಕಿತ್ಸೆ ನೀಡುವಂತಿಲ್ಲ ಎಂದು ತೀರ್ಮಾನಿಸಲಾಗಿದೆ.

 

Share Post