ಸಾಮಾನ್ಯ ಶೀತ ಎಂದು ನಿರ್ಲಕ್ಷ್ಯ ಎಂದು ನಿರ್ಲಕ್ಷ್ಯ ಮಾಡಬೇಡಿ; ಡಾ.ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ
ನವದೆಹಲಿ; ಶೀತ, ನೆಗಡಿಯಾದರೆ ಅದು ಸಾಮಾನ್ಯ ಶೀತ, ನೆಗಡಿ ಎಂದು ನಿರ್ಲಕ್ಷ್ಯ ಮಾಡೋದಕ್ಕೆ ಹೋಗಬೇಡಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ವೈರಸ್ನ ಒಮಿಕ್ರಾನ್ ಉಪತಳಿ ಜೆಎನ್1 (JN.1) ಹಾವಳಿ ಭಾರತದಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ಅವರು, ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಂತೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆಯೂ ಜಾಸ್ತಿಯಾಗಲಿದೆ. ಹೀಗಾಗಿ ಅದಕ್ಕಾಗಿ ಸಿದ್ದತೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.
ಈ ರೂಪಾಂತರಿಯಿಂದ ಹೆಚ್ಚು ಸಾವು ಸಂಭವಿಸುವುದಿಲ್ಲ. ತೀವ್ರ ಅನಾರೋಗ್ಯ ಸಮಸ್ಯೆ ಕೂಡಾ ಹೆಚ್ಚಿನವರಿಗೆ ಉಂಟಾಗುವುದಿಲ್ಲ. ಹಾಗಂತ ನಿರ್ಲಕ್ಷ್ಯ ಮಾಡೋದು ಸರಿಯಲ್ಲ. ದುರ್ಬಲ ರೋಗನಿರೋಧಕ ಶಕ್ತಿ ಇರುವವರು ಮುನ್ನೆಚ್ಚರಿಕೆ ವಹಿಸಿಬೇಕು. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು. ಮಾಸ್ಕ್ ಹಾಕಿಕೊಂಡೇ ತಿರುಗಾಡಬೇಕು ಎಂದು ಸೌಮ್ಯಾ ಅವರು ಹೇಳಿದ್ದಾರೆ.