ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು; ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರು ಅನಾರೋಗ್ಯಕ್ಕೀಡಾಗಿದ್ದು, ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ..
ಇದನ್ನೂ ಓದಿ; ದೇವೇಗೌಡರನ್ನು ಭೇಟಿಯಾದ ಮಾಜಿ ಸಚಿವ ರೇವಣ್ಣ; ಗೌಡರ ನಿವಾಸದ ಬಳಿ ಹೇಳಿದ್ದೇನು..?
ಇತ್ತೀಚೆಗಷ್ಟೇ ಎಸ್.ಎಂ.ಕೃಷ್ಣ ಅವರು ಜ್ವರದಿಂದ ಬಳಲುತ್ತಿದ್ದರು.. ಈ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ.. ಈ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ..
ಇದನ್ನೂ ಓದಿ; ಪ್ರಿಯತಮೆಯ ತಾಯಿಯನ್ನು ಗುಂಡಿಕ್ಕಿ ಕೊಂದ 17 ವರ್ಷದ ಬಾಲಕ!
ಎಸ್.ಎಂ.ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದೆ.. ಹೀಗಾಗಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ.. ಜೊತೆಗೆ ಬೇಸಿಗೆಯಾಗಿದ್ದರಿಂದ ಅವರಿಗೆ ಪದೇ ಪದೇ ಜ್ವರ ಕಾಣಿಸಿಕೊಳ್ಳುತ್ತಿದೆ.. ದೈಹಿಕವಾಗಿ ಕೊಂಚ ವೀಕ್ ಇರುವುದರಿಂದ ಅನಾರೋಗ್ಯಕ್ಕೀಡಾದಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.. ಆಸ್ಪತ್ರೆ ಮೂಲಗಳ ಪ್ರಕಾರ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ..