ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ತೀವ್ರ ಜ್ವರ; ಶಿವಮೊಗ್ಗ ಆಸ್ಪತ್ರೆಗೆ ದಾಖಲು!
ಶಿವಮೊಗ್ಗ; ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾಗಿದೆ.. ಅವರಿಗೆ ನಿನ್ನೆಯಿಂದ ತೀವ್ರ ಜ್ವರ ಕಾಣಿಸಕೊಂಡಿದೆ.. ಇದರಿಂದಾಗಿ ಅವರು ಬಳಲಿದಂತೆ ಕಾಣುತ್ತಿದ್ದಾರೆ.. ಹೀಗಾಗಿ ಅವರಿಗೆ ಮೊದಲಿಗೆ ಸಾಗರದ ಆಸ್ಪತ್ರೆಯಲ್ಲಿ ತೋರಿಸಿ ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ..
ಸಾಗರದ ಮನೆಯಲ್ಲಿದ್ದ ಕಾಗೋಡು ತಿಮ್ಮಪ್ಪಗೆ ನಿನ್ನೆಯಿಂದ ಜ್ವರ ಕಾಣಿಸಿಕೊಂಡಿತ್ತು.. ತೀವ್ರತೆ ಜಾಸ್ತಿಯಾದ ಹಿನ್ನೆಲೆಯಲ್ಲಿ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಆದ್ರೆ ತೀವ್ರ ಜ್ವರದಿಂದಾ ಕಾಗೋಡು ತಿಮ್ಮಪ್ಪ ಹೆಚ್ಚು ಬಳಲಿದಂತೆ ಕಾಣುತ್ತಿದ್ದರು.. ಈ ಹಿನ್ನೆಲೆಯಲ್ಲಿ ಪುತ್ರಿ ಡಾ.ರಾಜನಂದಿನಿ ಅವರು ಕಾಗೋಡು ತಿಮ್ಮಪ್ಪ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡಿದೆ.. ಅವರು ಗುಣಮುಖರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.. ಕಾಗೋಡು ತಿಮ್ಮಪ್ಪ ಅವರಿಗೆ 93 ವರ್ಷ ವಯಸ್ಸಾಗಿದೆ.. ಅವರು ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಗುರುತಿಸಿಕೊಂಡಿದ್ದ ಹಲವು ಖಾತೆಗಳನ್ನು ನಿಭಾಯಿಸಿದ್ದಾರೆ.. ವಿಧಾನಸಭಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ..