ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ; ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟಾಚಾರ್ಯ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಉಸಿರಾಟದ ತೀವ್ರ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರಿಟಿಕಲ್ ಕೇರ್ ಯೂನಿಟ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
2000 ರಿಂದ 2011 ರವರೆಗೆ ಬುದ್ಧದೇಬ್ ಭಟ್ಟಾಚಾರ್ಯ ಸಿಎಂ ಆಗಿದ್ದರು. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.