ಬಳ್ಳಾರಿಯ 100 ಮಂದಿಗೆ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆ
ಬಳ್ಳಾರಿ: ಎಲ್ಲಡೆ ಒಮಿಕ್ರಾನ್ ಭೀತಿ ಎದುರಾಗಿದೆ. ರಾಜ್ಯದಲ್ಲೂ ಕೂಡಾ ಪ್ರತಿದಿನ ಹೊಸ ಒಮಿಕ್ರಾನ್ ಕೇಸ್‌ಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಒಮಿಕ್ರಾನ್ ತಡೆಗೆ ತೀವ್ರ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ. ವಿದೇಶಗಳಿಂದ ಬಂದವರಿಗೆ ಕಂಪಲ್ಸರಿಯಾಗಿ ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್ ಮಾಡಿಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಸುಮಾರು 100 ಮಂದಿಯ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲಾಗಿದೆ.
ನೂರು ಮಂದಿ ವಿದೇಶಗಳಿಂದ ಬಳ್ಳಾರಿಗೆ ಆಗಮಿಸಿದ್ದರು. ಅವರಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ. ಆರ್‌ಟಿಪಿಸಿಆರ್ ಟೆಸ್ಟ್‌ನಲ್ಲೂ ನೆಗೆಟಿವ್ ಬಂದಿದೆ. ಹೀಗಿದ್ದರೂ, ಎಲ್ಲರ ಮಾದರಿಯನ್ನೂ ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್‌ಗೆ ಕಳುಹಿಸಲಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.