ಕೇಂದ್ರ ಸಚಿವ ಕುಮಾರಸ್ವಾಮಿ ಮುಗಿನಿಂದ ರಕ್ತಸ್ರಾವ; ಕಾರಣ ಏನು?
ಬೆಂಗಳೂರು; ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮೂಗಿನಿಂದ ಏಕಾಏಕಿ ರಕ್ತ ಸ್ರಾವವಾಗಿದೆ. ಹೀಗಾಗಿ ಅವರನ್ನು ಬೆಂಗಳೂರಿನ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವ್ರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಎನ್ಟಿ ವಿಭಾಗದ ಮುಖ್ಯಸ್ಥ ಡಾ.ಯತೀಶ್ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಕ್ತ ಸೋರಿಕೆ ನಿಂತಿದ್ದು, ಆತಂಕಪಡುವ ಅಗತ್ಯ ಇಲ್ಲ. ಕುಮಾರಸ್ವಾಮಿ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಪೋಲೊ ವೈದ್ಯರು ಹೇಳಿದ್ದಾರೆ.
ರಕ್ತ ಹೆಪ್ಪುಗತ್ತದಂತೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು.. ಹೀಗಾಗಿ ರಕ್ತಸ್ರಾವ ಆಗಿದೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.