ಕೋವಿಡ್ ಉಲ್ಬಣವಾಗಲು ಓಮೈಕ್ರಾನ್ ಕಾರಣ : WHO
ಜಿನೀವಾ : ಕಳೆದ 10 ವಾರದಲ್ಲಿ ವಿಶ್ವದಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಲು ಓಮೈಕ್ರಾನ್ ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಗೆಬ್ರೆಯೆಸಸ್ ಹೇಳಿದ್ದಾರೆ.
ಓಮೈಕ್ರಾನ್ ಇಲ್ಲಿಯವರೆಗೂ ವಿಶ್ವದಾದ್ಯಂತ 9ಕೋಟಿ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ಮೊದಲ ಸಾಂಕ್ರಾಮಿಕ ವರ್ಷ2020 ರಲ್ಲಿಯೂ ಇಷ್ಟು ಕಡಿಮೆ ಅವಧಿಯಲ್ಲಿ ಈ ಪ್ರಮಾಣದಲ್ಲಿ ಪ್ರಕರಣಗಳು ವರದಿಯಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಎಲ್ಲಾ ರಾಷ್ಟ್ರಗಳು ಕೋವಿಡ್ ನಿರ್ಬಂಧಗಳನ್ನು ಸಡಿಲಿಸುತ್ತಿವೆ. ಋೂಪಾಂತರಿ ವೈರಸ್ ಅನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು WHO ಹೇಳಿದೆ.