BengaluruHealth

ಕರ್ನಾಟಕದಲ್ಲಿ ಒಂದೇ ದಿನ 44 ಕೊರೊನಾ ಪಾಸಿಟಿವ್‌ ಕೇಸ್‌ಗಳು ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು; ಕೋವಿಡ್‌ ಉಪತಳಿ ಜೆಎನ್ 1  ಎಲ್ಲೆಡೆ ಹರಡುತ್ತಿದೆ. ಕರ್ನಾಟಕದಲ್ಲೂ ನಿನ್ನೆ ಒಂದೇ ದಿನ 44 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ರಾಜ್ಯದಲ್ಲಿ 79 ಸಕ್ರಿಯ ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಟೆಸ್ಟ್‌ಗಳ ಸಂಖ್ಯೆ ಜಾಸ್ತಿ ಮಾಡಲಾಗಿದೆ.

ಇದನ್ನು ಕರ್ನಾಟಕ ಆರೋಗ್ಯ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ. ನಿನ್ನೆ ಕೆಲವೊಂದು ಮಾರ್ಗಸೂಚಿಗಳನ್ನು ಕೂಡಾ ಬಿಡುಗಡೆ ಮಾಡಿದೆ. ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.6.09ರಷ್ಟಿದೆ.

 

 

Share Post